ಚಾಮರಾಜನಗರದಲ್ಲಿ ಚುನಾವಣಾ ಬಹಿಸ್ಕಾರ; ಪಿಠೋಪಕರಣ ಧ್ವಂಸ; ಪೂಲೀಸರಿಂದ ಲಾಠಿ ಚಾರ್ಜ್


ಕಿತ್ತೂರು ವಿಜಯ 

ಚಾಮರಾಜನಗರ: ಮಲಯಮಹೇದೇಶ್ವರ ಗ್ರಾಪಂ ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಇಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. 

ನಂತರ 5 ಗ್ರಾಮಗಳ ಗ್ರಾಮಸ್ಥರು ಮತಗಟ್ಟೆಯ ಮೇಲೆ ದಾಳಿ ನಡೆಸಿ ಮತಯಂತ್ರ, ಚುನಾವಣಾ ಪ್ರಕ್ರಿಯೆಗೆ ಬಹಸಿದ ಪೀಠೋಪಕರಣಗಳನ್ನು ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಚಾಮರಾಜನಗರದಲ್ಲಿ  ಇಂದು ನಡೆದಿದೆ.


ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ 5 ಗ್ರಾಮಗಳ ಗ್ರಾಮಸ್ಥರು ಮೂಲಸೌಕರ್ಯಕ್ಕೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ್ದರು. 

ಚುನಾವಣಾ ಅಧಿಕಾರಿಗಳು ಗ್ರಾಮಸ್ಥರನ್ನು ಮನವೊಲಿಕೆ ಮಾಡಿ ಮತಗಟ್ಟೆಗೆ ಕರೆತಂದಿದ್ದಾರೆ. ಈ ವೇಳೆ ಮತದಾನದಿಂದ ದೂರ ಉಳಿದಿದ್ದ ಇನ್ನೊಂದು ಗ್ರಾಮದ ಮತದಾರರು ಮತಗಟ್ಟೆ ಸುತ್ತ ನಿಂತಿದ್ದರು. ಅವರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. 

ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಪೊಲಿಸರು, ಸಿಬ್ಬಂದಿ  ಮತ್ತು  ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ ಮತಗಟ್ಟೆಗೆ ನುಗ್ಗಿ ಅಲ್ಲಿದ್ದ ಮತಯಂತ್ರ, ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಕೆಲ ಕಾಲ  ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಸದರಿ ಗ್ರಾಮಗಳಿ ಈವರೆಗೆ ವಿದ್ಯುತ್, ನೀರು, ಸಾರಿಗೆ ಸೇರಿದಂತೆ ಯಾವುದೇ ಮೂಲಸೌಕರ್ಯಗಳು ಇಲ್ಲದೇ ಗ್ರಾಮಸ್ಥರು ಇಂದಿಗೂ ಕತ್ತಲೆಯಲ್ಲಿ ಕಾಲಕಳೆಯುತ್ತಿದ್ದಾರೆ. ಜನಪ್ರತಿನಿಧಿಗಳಾಗಲಿ, ಸರ್ಕಾರವಾಗಲಿ ಈ ಗ್ರಾಮಗಳ ಜನರ ಸಂಕಷ್ಟವನ್ನು ಆಲಿಸುತ್ತಿಲ್ಲ. ಇದರಿಂದ ಬೇಸತ್ತು ಚುನಾವಣೆ ಬಹಿಷ್ಕರಿಸಿದ್ದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

Post a Comment

Previous Post Next Post
ಸುದ್ದಿ ಮತ್ತು ಜಾಹಿರಾತುಗಾಗಿ‌ ಸಂಪರ್ಕಿಸಿ : (ಮಾಹಾಂತೇಶ್ ಕರಬಸನ್ನವರ) : 9844101425